Tue. Dec 3rd, 2024

Mysore: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು!

ಮೈಸೂರು :(ಸೆ.21) ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ.

ಇದನ್ನೂ ಓದಿ: ⚖Aries to Pisces – ಇಂದು ಈ ರಾಶಿಯವರಿಗೆ ಹಿತಶತ್ರುಗಳಿಂದ ತೊಂದರೆ!!


ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯ ಜಯ ಮಾರ್ತಾಂಡ ಮುಖ್ಯ ದ್ವಾರದ ಪಕ್ಕದ ಕೋಡಿ ಸೋಮೇಶ್ವರ ದೇಗುಲದ ದ್ವಾರದಿಂದ ಆಚೆ ಓಡಿ ಬಂದಿದೆ.

ಆದರೂ ಬೆನ್ನು ಬಿಡದ ಧನಂಜಯ ಆನೆ ಕಂಜನ್ ಆನೆಯನ್ನು ಅಟ್ಟಿಸಿಕೊಂಡು ಬಂದಿದೆ.

ಇದರಿಂದ ಮತ್ತಷ್ಟು ಬೆದರಿದ ಕಂಜನ್ ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ಜನರ ಬಳಿ ಹೋಗಿದೆ.

ಇದನ್ನೂ ಓದಿ: 🐆Belthangadi: ಸವಣಾಲಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಈ ವೇಳೆ ಧನಂಜಯ ಅನೆ ಮೇಲೆ ಇದ್ದ ಮಾವುತ ಧೈರ್ಯದಿಂದ ಸಮಯಪ್ರಜ್ಞೆಯಿಂದ ಕೋಪಗೊಂಡಿದ್ದ ಧನಂಜಯನನ್ನು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.


ಧನಂಜಯ ಅಟ್ಟಾಡಿಸುವುದನ್ನು ನಿಲ್ಲಿಸಿತೋ ಬದುಕಿದೆಯಾ ಬಡ ಜೀವ ಅಂತ ಕಂಜನ್ ಆನೆ ಸಹ ನಿಂತುಕೊಂಡಿದೆ.

ತಕ್ಷಣ ಕಂಜನ್ ಆನೆಯ ಬಳಿ ತೆರಳಿದ ಮಾವುತ, ಕಂಜನ್ ಆನೆಯನ್ನು ಅರಮನೆ ಒಳಗೆ ಕರೆ ತಂದಿದ್ದಾನೆ.

ಈ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಮಾವುತರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *