Wed. Nov 20th, 2024

Nandini Ghee: ತಿರುಪತಿ ಲಡ್ಡು ವಿವಾದದ ಬಳಿಕ ಅಲರ್ಟ್ – ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ – ಧಾರ್ಮಿಕ ದತ್ತಿ ಇಲಾಖೆ ಆದೇಶ

ಬೆಂಗಳೂರು :(ಸೆ.21) ತಿರುಪತಿ ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬು ಬಳಕೆಯ ಆರೋಪ ಕೋಟಿ, ಕೋಟಿ ಭಾರತೀಯರ ನಂಬಿಕೆ, ಭಕ್ತಿಗೆ ಆಘಾತವನ್ನು ತಂದಿದೆ.

ಇದನ್ನೂ ಓದಿ: 🐘ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು!

ಲಡ್ಡು ಪ್ರಸಾದವನ್ನು ತಿಮ್ಮಪ್ಪನ ಪ್ರತಿಬಿಂಬ ಎಂದು ಭಾವಿಸಿದ್ದವರು ಒಂದು ಕ್ಷಣ ವಿಚಲಿತರಾಗುವಂತೆ ಮಾಡಿದೆ. ತಿರುಪತಿ ತಿಮ್ಮಪ್ಪನ ಈ ಪ್ರಸಾದದ ವಿವಾದಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಕೂಡ ಅಲರ್ಟ್ ಆಗಿದೆ.

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ರಾಜ್ಯದ ಎಲ್ಲಾ ದೇವಾಲಯಗಳಿಗೂ ರಾಜ್ಯ ಸರ್ಕಾರ ಮಹತ್ವದ ಸೂಚನೆಯನ್ನು ನೀಡಿದೆ. ರಾಜ್ಯದ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: 🐆Belthangadi: ಸವಣಾಲಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಗುಣಮಟ್ಟದಲ್ಲಿ ನಂದಿನಿ ತುಪ್ಪ ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗಾಗಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೂ ಸರ್ಕಾರ ಮಹತ್ವದ ಆದೇಶ ನೀಡಿದೆ.

ದೇವಾಲಯದ ಸೇವೆಗಳಿಗೆ, ದೀಪಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನೇ ಬಳಸಬೇಕು. ಜೊತೆಗೆ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಮಹತ್ವದ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ⭕Mangalore: ಬೈಕ್ ಸ್ಕಿಡ್ – ಕಾಲೇಜು ವಿದ್ಯಾರ್ಥಿ ಮೃತ್ಯು!

ಗುಣಮಟ್ಟದಲ್ಲಿ ನಂದಿನಿ ತುಪ್ಪ ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗಾಗಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೂ ಸರ್ಕಾರ ಮಹತ್ವದ ಆದೇಶ ನೀಡಿದೆ.

ದೇವಾಲಯದ ಸೇವೆಗಳಿಗೆ, ದೀಪಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನೇ ಬಳಸಬೇಕು. ಜೊತೆಗೆ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಮಹತ್ವದ ಸೂಚನೆ ನೀಡಲಾಗಿದೆ.

ರಾಜ್ಯದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಆಂಧ್ರದ ತಿರುಮಲ ತಿರುಪತಿ ದೇವಾಲಯದಲ್ಲಿ ಲಡ್ಡುಗೆ ಪ್ರಾಣಿ ಕೊಬ್ಬು ಬಳಕೆಯ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕದ ಎಲ್ಲ ಪ್ರಮುಖ ದೇವಾಲಯಗಳಲ್ಲಿ ಪ್ರಸಾದ ಪರೀಕ್ಷಿಸಲು ರಾಜ್ಯ ಸರ್ಕಾರದ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *