Mon. Feb 17th, 2025

Belthangady : 8 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿ ಬಂಧನ

8 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿ ಬಂಧನ

ಬೆಳ್ತಂಗಡಿ (ಸೆ. 22) : ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ರಾಜ್ಯದ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.


ಬೆಳ್ತಂಗಡಿ ಪೊಲೀಸ್ ಠಾಣೆಯ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ರಾಜ್ಯದ ಕಾಸರಗೋಡು ಮೂಲದ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಬಿ ಜಿ ಸುಬ್ಬಾಪುರ ಮಠ ಹಾಗೂ ಉಪ ನೀರಿಕ್ಷಕರು ಮುರಳೀಧರ್ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 21, 2024ರಂದು ಬೆಳ್ತಂಗಡಿ ತಾಲೂಕು, ಉಜಿರೆ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

ಆರೋಪಿಯನ್ನು ಮಾನ್ಯ ನ್ಯಾಯಾಲಯ ಮುಂದೆ ಹಾಜರಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು