Fri. Apr 11th, 2025

Udupi : ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು – ಪುತ್ತಿಗೆ ಶ್ರೀ ಗಳು

ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿ ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ (ಸೆ. 22) : ಹಿಂದೂ ಧರ್ಮೀಯರ ಅತ್ಯಂತ ಪ್ರಮುಖ ಶ್ರದ್ಧಾ ಕೇಂದ್ರವಾದ ತಿರುಪತಿಯ ಶ್ರೀವೇಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ ಪ್ರಸಾದವನ್ನು ಕಲಬೆರಕೆಯ ತುಪ್ಪವನ್ನು ಮಿಶ್ರಣ ಮಾಡುವ ಮೂಲಕ ದೊಡ್ಡ ಅಪಚಾರವನ್ನು ಮಾಡಲಾಗಿದೆ.

ಈ ಮೂಲಕ ಬಹು ದೊಡ್ಡ ಧಾರ್ಮಿಕ ಸಮಾಜವನ್ನು ಘಾಸಿಗೊಳಿಸಿದ್ದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧವಾಗಿದೆ. ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ.

ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು ಎಂದು ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು