Tue. Apr 8th, 2025

Udupi: ಧನ್ವಂತರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಉಡುಪಿ :(ಸೆ.23) ದೊಡ್ಡಣಗುಡ್ಡೆಯ ಧನ್ವಂತರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.

ಇದನ್ನೂ ಓದಿ: ⭕ನೆಲ್ಯಾಡಿ: ಕಾಲೇಜಿಗೆಂದು ಮನೆಯಿಂದ ಹೋದ ವಿದ್ಯಾರ್ಥಿ ನಾಪತ್ತೆ

ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಪ್ರತಿದಿನ ಕೆಲಸಕ್ಕೆ ಬರುವ ಮಹಿಳೆ ಬಂದು ಎಂದಿನಂತೆ ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಉಡುಪಿಯ ಧನ್ವಂತರಿ ಆಸ್ಪತ್ರೆಯಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಬೆಂಕಿ ಅನಾಹುತದಿಂದ ಆಸ್ಪತ್ರೆಯ ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡು ಆತಂಕಕ್ಕೆ ಕಾರಣವಾಯಿತು.

ಆಸ್ಪತ್ರೆಯಲ್ಲಿ ರಿನೋವೇಷನ್ ಆಗುತ್ತಿದ್ದರಿಂದ ರೋಗಿಗಳು ಯಾರೂ ಇಲ್ಲದ ಕಾರಣ, ಯಾವುದೇ ಜೀವ ಹಾನಿಯಾಗದೆ ದೊಡ್ಡ ದುರಂತ ತಪ್ಪಿದಂತಾಗಿದೆ ಎಂದು ತಿಳಿದು ಬಂದಿದೆ.

ಅನಾಹುತದ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿರುವ ಉಡುಪಿ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *