ಬೆಳ್ತಂಗಡಿ:(ಸೆ.25) ಮುಡಾ ಪ್ರಕರಣ ಇದು ಬಿಜೆಪಿಯ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ.
ಇದನ್ನೂ ಓದಿ: ⭕ಮಹಾಲಕ್ಷ್ಮೀ ಯನ್ನು ಭೀಕರವಾಗಿ ಕೊಂದ ವ್ಯಕ್ತಿ ಬೇರೆ ಯಾರು ಅಲ್ಲ- ಆಕೆಯ ಸಹೋದ್ಯೋಗಿಯೇ!!
ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.
ಕೇಂದ್ರದ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟವಾಗಿದೆ. ಬಿಜೆಪಿ, ಜೆಡಿಎಸ್ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ.
ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಗಳ ಪರವಾಗಿ ಭದ್ರವಾಗಿ ನಿಂತಿದ್ದಾರೆ.
ಬಡವರ ಪರವಾಗಿರುವ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.
ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳು ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಲಿದೆ.