Wed. Nov 20th, 2024

Mangalore: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್ – ರೋಗಿ ಮೃತ್ಯು!

ಮಂಗಳೂರು:(ಸೆ.25) ಆಂಬುಲೆನ್ಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ.

ಇದನ್ನೂ ಓದಿ: 🚌Mangalore: ಕೆಎಸ್‍ ಆರ್‌ ಟಿ ಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ವಿಶೇಷ ಪ್ರವಾಸ ಪ್ಯಾಕೇಜ್

ಕಡಬದಿಂದ ರೋಗಿಯನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಪಡೀಲ್ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಚಾಲಕನ‌ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *