Sat. Dec 14th, 2024

Muda scam- CM ಗೆ ಬಿಗ್ ಶಾಕ್ – ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು :(ಸೆ.25) ಅಕ್ರಮ ಮುಡಾ ಸೈಟ್ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್.ಐ.ಆ‌ರ್. ದಾಖಲಿಸಲು ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ: 🟣ಮಂಗಳೂರು: ಅಮೇರಿಕಾ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಯಕ್ಷಗಾನ ತಂಡ


82ನೇ ಸಿಸಿಹೆಚ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ಸೂಚನೆ ನೀಡಿದ್ದಾರೆ. ಮೈಸೂರು ಲೋಕಾಯುಕ್ತಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಲು ಕೋರ್ಟ್ ನಿರ್ದೇಶನ ನೀಡಿದೆ.


CRPC ಸೆಕ್ಷನ್ 156(3) ಅಡಿ ಕೇಸ್ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಅಂದ್ರೆ ಡಿಸೆಂಬರ್ 24, 2024ಕ್ಕೆ ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು