ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:54 ರಿಂದ ಸಂಜೆ 03:24, ಯಮಘಂಡ ಕಾಲ ಬೆಳಿಗ್ಗೆ 06:23ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:54 ರ ವರೆಗೆ.
ಮೇಷ ರಾಶಿ : ನಿಮ್ಮ ನಿಜವಾದ ಪ್ರಯತ್ನಕ್ಕೆ ದೈವವೂ ಸಹಾಯ ಮಾಡುವುದು. ಇಂದು ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ಪ್ರೇಮದ ವಿಚಾರದಲ್ಲಿ ಆಸಕ್ತಿ ಹೆಚ್ಚಾಗಿದ್ದು ಪ್ರೇಮಿಯನ್ನು ನೋಡಲು ಹಂಬಲಿಸುವಿರಿ. ಮಹಿಳಾ ಉದ್ಯೋಗಿಗಳಿಗೆ ಸೂಕ್ತಸ್ಥಾನವು ಸಿಗಲಿದೆ. ಎಲ್ಲಿಯೋ ಹೂಡಿಕೆ ಮಾಡಿ ನಷ್ಟಮಾಡಿಕೊಳ್ಳುವಿರಿ. ಯಾರ ಮೇಲೂ ದೂರನ್ನು ಹಾಕುವುದು ಬೇಡ. ಮನೆಯಿಂದ ದೂರವಿರುವ ಉದ್ಯೋಗವು ನಿಮಗೆ ಸಿಗುವ ಸಾಧ್ಯತೆ ಇದೆ.
ವೃಷಭ ರಾಶಿ :ಅನಾರೋಗ್ಯಕ್ಕೆ ಉತ್ತಮ ಚಿಕಿತ್ಸೆಗಿಂತ ಮಾನಸಿಕ ನೆಮ್ಮದಿ ಧೈರ್ಯಗಳು ಉಪಯೋಗಕ್ಕೆ ಬರುವುದು. ಬೇರೆಯವರು ಖುಷಿಪಡುವಂತೆ ಮಾತನಾಡುವಿರಿ. ಆರ್ಥಿಕ ಸಹಾಯವು ಸಿಗದೇ ಕಷ್ಟಪಡಬೇಕಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದೇ ಇದ್ದೀತು. ಚರ ಆಸ್ತಿಯನ್ನು ಕಳೆದುಕೊಳ್ಳಬಹುದು. ಯಾರಾದರೂ ನಿಮಗೆ ಸ್ಫೂರ್ತಿಯಾಗಬಹುದು.
ಮಿಥುನ ರಾಶಿ : ಉದ್ಯಮದಿಂದ ಆದ ಲಾಭಕ್ಕೆ ನಿಮಗೆ ಆದಾಯ ಸಿಗುವುದು. ಇಂದು ಆಪ್ತರು ನಿಮಗೆ ಬರುವ ಸಂಕಟದಲ್ಲಿ ಜೊತೆಯಾಗುವರು. ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸಾಗುವುದು. ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಯಾರದೋ ತಪ್ಪಿಗೆ ನೀವು ಬಲಿಯಾಗಬೇಕಾಗುವುದು. ಭೋಗವಸ್ತುಗಳನ್ನು ಖರೀದಿಸಿದರೂ ನಿಮಗೆ ಸಂತೃಪ್ತಿ ಸಿಗದು.
ಕರ್ಕಾಟಕ ರಾಶಿ : ನಿಮಗೆ ಗೊತ್ತಿರುವುದನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ವೀಕ್ಷಿಸಬಹುದು. ಇಂದು ನಿಮಗೆ ಬರಬೇಕಾದ ಹಣವು ಅನಿರೀಕ್ಷಿತ ರೀತಿಯಲ್ಲಿ ಬಂದರೂ ಅದು ಇನ್ನೊಂದು ಮಾರ್ಗದಲ್ಲಿ ಖಾಲಿಯಾಗುವುದು. ನಿಮಗೆ ಇಷ್ಟವಿಲ್ಲದವರನ್ನು ಮನಸ್ಸಿನಿಂದ ಹೊರಹಾಕಿ.
ಸಿಂಹ ರಾಶಿ : ನಿಮಗೆ ಇಂದು ಏನಾದರೂ ಹೊಸತನ್ನು ಮಾಡುವ ಉದ್ದೇಶವಿರುವುದು. ಇಂದು ನಿಮ್ಮ ಕರ್ತವ್ಯಗಳನ್ನು ಮರೆಯು ಸಾಧ್ಯತೆ ಇದ್ದು, ಯಾರೋ ಅದನ್ನು ನೆನಪಿಸಬೇಕಾದೀತು. ಹೂಡಿಕೆಯನ್ನು ಮಾಡಿ ಹೊಸ ಚಿಂತೆಯನ್ನು ತಂದುಕೊಳ್ಳುವಿರಿ. ಇಷ್ಟ ಮಿತ್ರರ ಜೊತೆ ಸಮಯವನ್ನು ಕಳೆಯುವಿರಿ. ಅಸೂಯೆಯ ಕಾರಣ ಯಾವ ಸಂತೋಷವನ್ನೂ ನೀವು ಪೂರ್ಣವಾಗಿ ಅನುಭವಿಸಲಾರಿರಿ.
ಕನ್ಯಾ ರಾಶಿ : ಇಂದು ನೀವು ನಿಮ್ಮ ಪ್ರತಿಬಂಧವನ್ನು ಮೀರಿ ತೊಂದರೆ ಪಡುವಿರಿ. ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಪಾಲುದಾರಿಕೆ ಸಿಗಬಹುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮರೆಯಬಹುದು. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಹೊಸ ವಸ್ತುಗಳು ನಿಮಗೆ ಖುಷಿಯನ್ನು ಕೊಟ್ಟೀತು.
ತುಲಾ ರಾಶಿ : ಇಂದು ನಿಮ್ಮಲ್ಲಿ ಉತ್ಸಾಹವಿದ್ದು ನೀವೇ ಸ್ವತಃ ಜವಾಬ್ದಾರಿಯನ್ನು ಪಡೆಯುವಿರಿ. ನಿಮ್ಮದಾದ ಸಂಪತ್ತನ್ನು ಇನ್ನೊಬ್ಬರಿಗೆ ಕೊಡಬೇಕಾಗುವುದು.ಬೆನ್ನು ನೋವು ನಿಮ್ಮ ಯಾವ ಕೆಲಸವನ್ನೂ ಮಾಡಲು ಕೊಡದು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡಲಿದ್ದೀರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಅತಿಯಾದ ಆಸೆ ಬೇಡ.
ವೃಶ್ಚಿಕ ರಾಶಿ : ವ್ಯಾವಹಾರಿಕ ಸಂಬಂಧವನ್ನು ಹಾಗೆಯೇ ಇಟ್ಟುಕೊಂಡರೆ ಒಳ್ಳೆಯದು. ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ. ವ್ಯಾಪರವು ನಷ್ಟವಾದರೂ ತಾಳ್ಮೆಯಿಂದ ಇದ್ದು ಇದನ್ನು ಮುಂದುವರಿಸಿ. ಮೂರನೇ ವ್ಯಕ್ತಿಗಳ ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬಯಸುವಿರಿ. ವಿದೇಶವನ್ನು ಸುತ್ತುವ ಮನಸ್ಸಾಗುವುದು. ಆರ್ಥಿಕತೆಯನ್ನು ಸುಸ್ಥಿರ ಮಾಡಿಕೊಳ್ಳಲು ದೇಹವನ್ನು ದಂಡಿಸಬೇಕಾಗುವುದು.
ಧನು ರಾಶಿ : ನಿಮ್ಮ ನಿಯೋಜಿತ ಕಾರ್ಯಗಳನ್ನು ಮಾಡಲು ಜನರು ಸಿಗದೇಹೋಗಬಹುದು. ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವವವನ್ನು ವಹಿಸುವಿರಿ. ನಿಮ್ಮ ಬಳಿ ಸಾಲವನ್ನು ಕೇಳಬಹುದು. ವೈದ್ಯರಿಗೆ ಪ್ರಶಂಸೆ ಸಿಗಬಹುದು. ಸರ್ಕಾರಿ ಉದ್ಯೋಗಿಗಳ ಸ್ಥಾನವು ಬದಲಾಗುವುದು. ಎಲ್ಲವನ್ನೂ ತಿಳಿದಿದ್ದೇನೆ ಎಂಬ ಅಹಂಕಾರ ಬೇಡ. ಭವಿಷ್ಯದ ಬಗ್ಗೆ ದೊಡ್ಡ ಕನಸನ್ನು ಇಟ್ಟುಕೊಳ್ಳುವಿರಿ.
ಮಕರ ರಾಶಿ : ನಿಮ್ಮ ಮಕ್ಕಳನ್ನು ಸರಿಯಾದ ಮಾರ್ಗಕ್ಕೆ ತರಲು ಸಮಯವು ಬೇಕಾಗುವುದು. ಕುಟುಂಬದವರ ಮಾತಿನ ಅಲಕ್ಷ್ಯದಿಂದ ನಿಮಗೆ ಸಮಸ್ಯೆಯಾದೀತು. ಸಂಗಾತಿಯ ನೋವನ್ನು ಕೇಳುವಷ್ಟು ತಾಳ್ಮೆ ಇಲ್ಲವಾದೀತು. ಸರಿಯಾದ ಸಮಯಕ್ಕೆ ವೈದ್ಯರ ಬಳಿ ಹೋಗಿ ಆರೋಗ್ಯವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ನಿರ್ಬಂಧಗಳು ಕುಟುಂಬದವರಿಗೆ ಇಷ್ಟವಾಗದು.
ಕುಂಭ ರಾಶಿ : ಸಾಮಾಜಿಕ ಕಾರ್ಯಗಳ ಬಗ್ಗೆ ಕಿವಿಮಾತನ್ನು ಆಪ್ತರು ಹೇಳುವರು. ಅದನ್ನು ಕೇಳಿಸಿಕೊಳ್ಳುವ ವ್ಯವಧಾನವೂ ಬೇಕು. ನಿಮ್ಮ ಮಾತು ಇಂದು ಕೇಳುಗರಿಗೆ ಹಿಂಸೆ ಕೊಡಬಹುದು. ಸಂಗಾತಿಯ ನಡುವೆ ಭಿನ್ನಾಭಿಪ್ರಾಯವು ಬರಬಹುದು. ಸತತ ಸುತ್ತಾಟದಿಂದ ಆಯಾಸವಾಗಲಿದೆ. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ.
ಮೀನ ರಾಶಿ : ನಿಮ್ಮ ಇಂದಿನ ಶ್ರಮವು ಎಷ್ಟೇ ಇದ್ದರು ಒಂದು ಮಾತು ಎಲ್ಲದಕ್ಕೂ ತಣ್ಣೀರು ಹಾಕುವುದು. ನೀವು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗುವಿರಿ. ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನೀವು ವ್ಯಾಪಾರದಲ್ಲಿ ಆರ್ಥಿಕ ಲಾಭಕ್ಕಿಂತ ಗ್ರಾಹಕರ ವಿಶ್ವಾಸ ಗಳಿಸುವುದು ಇಂದು ನಿಮಗೆ ಮುಖ್ಯವೆನಿಸುವುದು. ಆರ್ಥಿಕವಾಗಿ ಸಬಲರಾಗಲು ಅನೇಕ ಆರ್ಥಿಕ ಮೂಲವನ್ನು ಹುಡುಕುವಿರಿ.