Thu. Dec 26th, 2024

Puttur: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ

ಪುತ್ತೂರು:(ಸೆ.26) ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.

ಇದನ್ನೂ ಓದಿ: ⭕ಮಹಾಲಕ್ಷ್ಮೀಯನ್ನ 59 ತುಂಡು ಮಾಡಿ ಕೊಂದಿದ್ದ ಆರೋಪಿ ಬರೆದಿದ್ದ ಡೆತ್ ನೋಟ್ ಪತ್ತೆ

ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕನಕರಾಜು ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *