ಉಜಿರೆ:(ಸೆ.28) ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆ ಇಂದು ಉಜಿರೆಯಲ್ಲಿ ನಡೆಯಿತು.
ಇದನ್ನೂ ಓದಿ: 🟠ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳ ನೇಮಕ
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ರಥದಲ್ಲಿ ಅಳವಡಿಸಲಾದ ಭವ್ಯ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲೆಗೆ ಬರಮಾಡಿಕೊಂಡರು.
ಚಿಕ್ಕಮಗಳೂರು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಥಯಾತ್ರೆಯನ್ನು ತಹಶೀಲ್ದಾರ್ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ದ. ಕ. ಜಿಲ್ಲಾ ಕ. ಸಾ. ಪ. ಅಧ್ಯಕ್ಷ ಡಾ.ಶ್ರೀನಾಥ್ ಎಂ ಪಿ, ಬೆಳ್ತಂಗಡಿ ತಾಲೂಕು ಕ.ಸಾ.ಪ. ಅಧ್ಯಕ್ಷ ಯದುಪತಿ ಗೌಡ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.
ರಥಯಾತ್ರೆಯಲ್ಲಿ ರಾಜ್ಯದ ಕಲೆ, ಜಾನಪದ ಸಂಸ್ಕೃತಿಯನ್ನು ಬಿಂಬಿಸುವ ಪ್ರತಿಕೃತಿಗಳನ್ನು ಅಳವಡಿಸಲಾಗಿತ್ತು.
ಕಲಾವಿದರು ತಮಟೆ ಬಾರಿಸುವ ಮೂಲಕ ರಥಯಾತ್ರೆಯನ್ನು ಸ್ವಾಗತಿಸಿದರು. ರಥಯಾತ್ರೆ ಶನಿವಾರ ಬೆಳ್ತಂಗಡಿಯಲ್ಲಿ ವಾಸ್ತವ್ಯವಿದ್ದು, ಭಾನುವಾರ ಮಂಗಳೂರಿಗೆ ನಿರ್ಗಮಿಸಲಿದೆ ಎಂದು ತಿಳಿಸಿದ್ದಾರೆ.