ಬೆಳ್ತಂಗಡಿ:(ಅ.1) ಆರ್ಥಿಕ ಸಂಕಷ್ಟದಲ್ಲಿದ್ದು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಪುತ್ತಿಲ ನಿವಾಸಿ ನೀಲಯ್ಯ ಗೌಡರ ಪತ್ನಿ ಸುನಂದಾ ಇವರಿಗೆ
ಇದನ್ನೂ ಓದಿ: ⭕ಕಾಸರಗೋಡು : ಮನೆಗೆ ನುಗ್ಗಿ ಮಾವನ ಕೊಲೆಗೆ ಯತ್ನ
ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.15,000/-ದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಇವರ ಮೂಲಕ ಫಲಾನುಭವಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂಧರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷರಾದ ಲೋಕಯ್ಯ ಗೌಡ ಮಂಗಳೂರು, ಸದಸ್ಯರಾದ ಗಣೇಶ್ ಗೌಡ ಕಲಾಯಿ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷರಾದ ಪದ್ಮ ಗೌಡ ಬೆಳಾಲು,
ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಾನಡ್ಕ, ಜತೆ ಕಾರ್ಯದರ್ಶಿ ಶ್ರೀನಾಥ ನಡ,
ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ, ಸವಣಾಲು, ತಾಲೂಕು ಸಂಘದ ನಿರ್ದೇಶಕರುಗಳು, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ,
ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಯುವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸ್ಪಂದನಾ ಸೇವಾ ಸಂಘದ ಸದಸ್ಯರುಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.