ಮಂಡ್ಯ :(ಅ.1) ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗಾಯಗೊಂಡವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ⭕ಕಾರ್ಕಳ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣ
ಎಕ್ಸ್ಪ್ರೆಸ್ ಹೈವೇಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸರ್ವೀಸ್ ರಸ್ತೆ ಕಡೆ ತಿರುಗಿದೆ. ಈ ವೇಳೆ ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತಕ್ಕೆ ಒಳಗಾದ ಕೆ.ಎಸ್.ಆರ್.ಟಿ.ಸಿ ಅಲ್ಲಿ 80ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಬರುತ್ತಿದ್ದ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು ಪ್ರಯಾಣ ಮಾಡುತ್ತಿದ್ದರು. ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, 30ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭೇಟಿ ನೀಡಿದ್ದಾರೆ.