Tue. Apr 8th, 2025

Bengaluru: ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಸಿಎಂ ಶೂ ಲೇಸ್ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ

ಬೆಂಗಳೂರು:(ಅ.2) ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಂದು ವಿವಾದದ ಸುಳಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಸಿಎಂ ಶೂ ಲೇಸ್ ಬಿಚ್ಚಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 🔶ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್‌’ಗೆ ಯಾವಾಗಲೂ ಕಾಲ ಕಸ ಎಂಬುದಾಗಿ ಕಿಡಿಕಾರಿದ್ದಾರೆ.

ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂಬುದಾಗಿ ವಾಗ್ದಾಳಿ ನಡೆಸಿದ್ದಾರೆ.

ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಭಾರತೀಯರ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *