ಮಂಗಳೂರು:(ಅ.2) ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಅಶ್ಲೀಲ ಸಂದೇಶ ಹಾಗೂ ಫೋಟೊಗಳನ್ನು ಕಳುಹಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಈ ಘಟನೆ ನಡೆದಿದೆ. ಸುರತ್ಕಲ್ನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಮಂಜನಾಡಿಯ ಮೊಹಮ್ಮದ್ ಶಾಕಿಬ್ ಎಂಬಾತ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾನೆ.
ಸ್ನೇಹಿತೆಯ ಬಳಿಯಿಂದ ನಂಬರ್ ಪಡೆದು ವಿದ್ಯಾರ್ಥಿನಿಗೆ ಈತ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ವಾಟ್ಸಪ್ನಲ್ಲಿ ಅಶ್ಲೀಲ ಸಂದೇಶ, ಫೋಟೊಗಳನ್ನು ಕಳುಹಿಸುತ್ತಿದ್ದ.
ಯುವತಿಗೆ ಮರ್ಮಾಂಗದ ಚಿತ್ರ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.
ಮಾನಸಿಕವಾಗಿ ನೊಂದ ಯುವತಿ ಅನಾರೋಗ್ಯಕ್ಕೀಡಾಗಿ, ಬಿಪಿ ಲೋ ಆಗಿ ಕಾಲೇಜಿಗೂ ಹೋಗದೆ ಮನೆಯಲ್ಲೇ ಉಳಿಯುವಂತಾಗಿತ್ತು.
ಯುವತಿ ವಿಚಾರವನ್ನು ಮನೆಯವರಿಗೆ ತಿಳಿಸಿದ್ದು, ಯುವಕನ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಶಾಕಿಬ್ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.