Wed. Apr 16th, 2025

Ujire: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ:(ಅ.2) ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ ಗಾಂಧಿ ಜಯಂತಿ ಹಾಗೂ ಭಾರತದ ಸ್ವಾತಂತ್ರ್ಯ ಹೋರಾಟಗಾರರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಇದನ್ನೂ ಓದಿ: 🔴ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ ಆಚರಣೆ

ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ವೇದಿಕೆಯಲ್ಲಿ ಇಬ್ಬರ ಭಾವಚಿತ್ರಗಳಿಗೆ ಸಹ ಶಿಕ್ಷಕಿಯರಾದ ವಿನಯಲತಾ, ಗ್ರೇಸಿಸಲ್ಡಾನ, ಐರಿನ್ ರೋಡ್ರಿಗಸ್ ಇವರು ಪುಷ್ಪನಮನವನ್ನು ಸಲ್ಲಿಸುವುದರ ಮೂಲಕ ಗೌರವವನ್ನು ಸಮರ್ಪಿಸಿದರು.

ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು. ವಿದ್ಯಾರ್ಥಿಗಳು ಸರ್ವಧರ್ಮದ ಗ್ರಂಥ ಪಠಣದ ,

ನಂತರ ವಿದ್ಯಾರ್ಥಿನಿ ಅನುಷ್ಕಾ ಶೆಟ್ಟಿ ಅವರು ಇಂದಿನ ದಿನದ ವಿಶೇಷತೆಯ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಶಾರೋನ್ ಅವರ ಸ್ವಾಗತಿಸಿ, ನಿರೂಪಣೆ ಹಾಗೂ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *