Wed. Nov 20th, 2024

Deathnote: 5ನೇ ಮಹಡಿಯಿಂದ ಬಿದ್ದು ಯುವತಿ ಆತ್ಮಹತ್ಯೆ – ಡೆತ್‌ನೋಟ್ ನಲ್ಲಿ ಯುವತಿ ಮಾಡಿದ ಮನವಿಯೇನು ಗೊತ್ತಾ?

ಬೆಂಗಳೂರು:(ಅ.4) ಸಿಲಿಕಾನ್ ಸಿಟಿಯ ಪಿಜಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. PGಯ 5ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಗೌತಮಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ⭕ಮದುವೆಗೆ ನೋ ಎಂದ ಸೀರಿಯಲ್‌ ನಟಿ – ಆತ್ಮಹತ್ಯೆಗೆ ಶರಣಾದ ಯುವಕ

ಮೃತ ಗೌತಮಿ ಆಂಧ್ರಪ್ರದೇಶ ಕಡಪ ಮೂಲದವರು. ಬೆಂಗಳೂರಲ್ಲಿ ನೆಲೆಸಿದ್ದ ಯುವತಿ TCSನಲ್ಲಿ ಕೆಲಸ ಮಾಡುತ್ತಿದ್ದಳು. ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ.

ಪಿಜಿಯ ಐದನೇ ಮಹಡಿಯಿಂದ ಸಾವನ್ನಪ್ಪಿರುವ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಸಾವಿನ ತನಿಖೆ ನಡೆಸಿರುವ ವೈಟ್‌ಫೀಲ್ಡ್‌ ಠಾಣೆಯ ಪೊಲೀಸರಿಗೆ ಡೆತ್‌ನೋಟ್ ಕೂಡ ಸಿಕ್ಕಿದೆ.

ಡೆತ್‌ನೋಟ್‌ನಲ್ಲಿ ಏನಿದೆ?
ಸಾವಿಗೂ ಮುನ್ನ ಡೆತ್‌ನೋಟ್ ಬರೆದಿರುವ ಗೌತಮಿ, ನನ್ನ ಮೃತದೇಹವನ್ನು ಪೋಸ್ಟ್‌ ಮಾರ್ಟಂ ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. Sorry. ನನ್ನ ಪೋಷಕರಿಗೆ‌ ನನ್ನ ಮೃತದೇಹ ನೀಡಿ ಎಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *