Harshika Poonacha:(ಅ.4) ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ದಂಪತಿಗೆ ಹೆಣ್ಣು ಮಗು ಆಗಿದೆ. ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಭುವನ್ ಪೊನ್ನಣ್ಣ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ; 🟣ಸರ್ಕಾರಿ ಹಿಡಿತದಲ್ಲಿ ವ್ಯಾಪಾರಿ ಕೇಂದ್ರಗಳಾಗುತ್ತಿವೆ ದೇಗುಲಗಳು
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರ್ಷಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಹೆಣ್ಣು ಮಗುವಿನ ಆಗಮನದಿಂದ ಸಂತಸಗೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೊನ್ನಣ್ಣ ಅವರು ಅಪ್ಡೇಟ್ ನೀಡಿದ್ದು, ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ.
ಹರ್ಷಿಕಾ ಮತ್ತು ಮಗಳು ಆರೋಗ್ಯವಾಗಿದ್ದಾರೆ. ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.