Wed. Nov 20th, 2024

Kanyadi: ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕನ್ಯಾಡಿ:(ಅ.4) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಇದನ್ನೂ ಓದಿ: ⚖Daily Horoscope – ನವರಾತ್ರಿಯ 2 ನೇ ದಿನವಾದ ಇಂದು ಕನ್ಯಾ ರಾಶಿಯವರಿಗೆ ಶುಭ ಫಲ!!

155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಬೆಳಿಗ್ಗೆ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ನಂತರ ಎಲ್ಲರೂ ಶಾಲಾ ಸಭಾಂಗಣದಲ್ಲಿ ಸೇರಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ನಂದ ಕೆ ಇವರು ದೀಪ ಬೆಳಗಿಸಿ ಭಾವಚಿತ್ರಕ್ಕೆ ಗೌರವ ಪೂರಕವಾದ ಪುಷ್ಪ ನಮನವನ್ನು ಸಲ್ಲಿಸಿದರು. ಶಿಕ್ಷಕ ವೃಂದದವರು ಹಾಗೂ ಶಾಲಾ ನಾಯಕ ಪುಷ್ಪ ನಮನ ಸಲ್ಲಿಸಿದರು. ನಂತರ ಸರ್ವಧರ್ಮ ಪ್ರಾರ್ಥನೆಯನ್ನು , ಧರ್ಮ ಗ್ರಂಥಗಳ ಪಠಣವನ್ನು ಮಾಡಲಾಯಿತು.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತಂತೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತಾಯಿ ಹೆಸರಿನಲ್ಲಿ ಒಂದು ಗಿಡ ಯೋಜನೆಯಡಿ ನಮ್ಮ ಶಾಲೆಯ ಮಕ್ಕಳು ಪೋಷಕರೊಂದಿಗೆ ಶಾಲೆಗೆ ಆಗಮಿಸಿ ಕರಿಬೇವು, ಸೀತಾಫಲ, ನಿಂಬೆ, ನೇರಳೆ, ತೆಂಗು ಮೊದಲಾದ ಗಿಡಗಳನ್ನು ನೆಟ್ಟು ಅವುಗಳನ್ನು ಚೆನ್ನಾಗಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಪಾಲ್ಗೊಂಡರು. ಮಧ್ಯಾಹ್ನದ ಬಿಸಿ ಊಟ ಮತ್ತು ಸಿಹಿಯನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಈ ಕಾರ್ಯಕ್ರಮದ ಜವಾಬ್ದಾರಿಯನ್ನು ವಿದ್ಯಾರ್ಥಿಗಳೇ ನಿರ್ವಹಿಸಿ ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *