ಬೆಳ್ತಂಗಡಿ :(ಅ.5) ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ರೀತಿಯಲ್ಲಿ ವೃದ್ಧರೋರ್ವರು ಮೃತಪಟ್ಟಿರುವುದು ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ರಾಜೀವ ಪೂಜಾರಿ (72 ) ಎಂದು ಗುರುತಿಸಲಾಗಿದೆ.
ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಪುಂಜಾಲಕಟ್ಟೆ ಠಾಣೆಯ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡ ಭೇಟಿ ನೀಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

