ವಿಟ್ಲ:(.7) ಅ. 6 ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ.
ಈ ವೇಳೆ ಆಯತಪ್ಪಿ ನದಿಗೆ ಬಿದ್ದ ಮುಸ್ಲಿಂ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆಯ ವೇಳೆ ಸಂಜೆ ಸುಮಾರು 6:30 ರ ಹೊತ್ತಿಗೆ ವ್ಯಕ್ತಿಯೊಬ್ಬರು ಸೇತುವೆ ವೇಳೆ ಹೋಗುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ.
ಕೂಡಲೇ ಅಲ್ಲೇ ಇದ್ದ ಯುವಕರು ನದಿಯ ಪ್ರವಾಹವನ್ನೂ ಲೆಕ್ಕಿಸದೆ ಹಾರಿ ಈಜಾಡಿಕೊಂಡು ಹೋಗಿ ರಕ್ಷಣೆ ಮಾಡಿ ಅಪಾಯದಿಂದ ರಕ್ಷಿಸಿದ್ದಾರೆ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ ಮಾಡಿದ ಯುವಕರು. ಸುಮಾರು 70ರ ಹರೆಯದ ಉಮ್ಮರ್ ರಕ್ಷಿಸಲ್ಪಟ್ಟವರು.
ಉಮ್ಮರ್ ಅವರು ಹೊಳೆಗೆ ಬೀಳುವುದನ್ನು ನೋಡಿದ ಕೂಡಲೇ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಇಬ್ಬರು ಯುವಕರು ನದಿಗೆ ಹಾರಿ ಈಜಾಡಿಕೊಂಡು ಹೋಗಿ ಉಮ್ಮರ್ ಅವರನ್ನು ರಕ್ಷಿಸಿದ್ದಾರೆ. ಕೂಡಲೇ ಸ್ಥಳದಲ್ಲೇ ಇದ್ದ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಎಲ್ಲರು ಭೇಷ್ ಅಂದಿದ್ದಾರೆ.
Vitla: Hindu youth who jumped into the river and saved the Muslim man regardless of the danger..!