Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

ಮೇಷ ರಾಶಿ : ಉದ್ವೇಗದಿಂದ ಅನರ್ಥವು ನಡೆಯುವ ಸಾಧ್ಯತೆ ಇದೆ. ಆರ್ಥಿಕ ಉಳಿತಾಯವನ್ನು ಅನ್ಯರಿಂದ ಕೇಳಿ ಪಡೆಯುವುದು ಉಚಿತ. ಪ್ರಶಾಂತ ವಾತಾವರಣವನ್ನು ಹುಡುಕುವಿರಿ. ನಿಮ್ಮ ಮಾತೇ ನಿಮಗೆ ಬೇರೆಯವರ ಮೂಲಕ ಬರಬಹುದು. ನಿಮ್ಮಿಂದ ಅತಿಥಿಗಳಿಗೆ ಸಂತೋಷವಾಗಬಹುದು.‌ ಹೊಸ ವಾಹನದ ಖರೀದಿಗೆ ಹಣವನ್ನು ಖರ್ಚು ಮಾಡಬೇಕಾದೀತು‌.

ವೃಷಭ ರಾಶಿ : ನಿಮ್ಮದಲ್ಲದ ತಪ್ಪಿಗೂ ನೀವು ಕ್ಷಮೆಯನ್ನು ಕೇಳಬೇಕಾಗುವುದು. ವ್ಯವಹಾರದ ಮೋಸವನ್ನು ನೀವು ಸಹಿಸಲಾರಿರಿ. ಉಳಿದಿದ್ದ ಎಲ್ಲ ಸಾಲವನ್ನೂ ತೀರಿಸುವಿರಿ. ಬೆನ್ನು ನೋವು ನಿಮ್ಮನ್ನು ಕಾಡಬಹುದು. ಸಹೋದರನ ಅಸಹಕಾರವು ನಿಮಗೆ ಹಿಂಸೆಯನ್ನು ಕೊಡುವುದು. ಅತಿಯಾದ ಅನಾರೋಗ್ಯವು ಉಂಟಾದರೆ ವೈದ್ಯರ ಸಲಹೆಯನ್ನು ಪಡೆಯಿರಿ. ಸಕಾರಾತ್ಮ ಆಲೋಚನೆಗಳೇ ನಿಮ್ಮನ್ನು ಸಂತೋಷವಾಗಿ ಇಡುವುದು.

ಮಿಥುನ ರಾಶಿ : ನಿಮ್ಮ ಪ್ರಧಾನಕಾರ್ಯಕ್ಕಿಂತ ಅಪ್ರಧಾನದಿಂದ ಆದಾಯವು ಅಧಿಕವಾಗಿ ಸಿಗುವುದು. ನಿಮ್ಮ ಪ್ರಭಾವವು ಎಲ್ಲರಿಗೂ ತಿಳಿಯಬಹುದು. ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿಯಾಗಲಿದೆ. ತಂದೆಯ ಸೇವೆಯನ್ನು ಮಾಡುವ ಮನಸ್ಸು ಆಗಲಿದೆ. ಬೇರೆಯವರ ಮಾತನ್ನು ಪೂರ್ಣವಾಗಿ ನಂಬಲು ನಿಮಗೆ ಇಷ್ಟವಾಗುವುದು. ನಿಮಗೆ ಮಕ್ಕಳಿಂದ ಹೆಚ್ಚಿನ ಸಂತೋಷವು ಸಿಗಲಿದೆ. ದುಶ್ಚಟಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ : ನಿಮ್ಮ ಮಿತಿಯಲ್ಲಿ ಬಯಕೆಯು ಇರಲಿ. ವೃತ್ತಿಯಲ್ಲಿ ಮೇಲೇರಿದ ಅನುಭವ ಆಗಬಹುದು.‌ ಇಂದು ಯಾವ ಕಾರ್ಯವನ್ನು ಮೊದಲು ಮಾಡಬೇಕು ಎಂಬ ಯೋಜನೆಯನ್ನು ಇಟ್ಟುಕೊಳ್ಳುವಿರಿ. ದಾಂಪತ್ಯದಲ್ಲಿ ನಿಮಗೆ ವೈಮನಸ್ಯ ಉಂಟಾದರೂ ಅದು ಸರಿಮಾಡಿಕೊಳ್ಳುವಿರಿ. ಯಾರಿಗಾದರೂ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳಬಹುದು. ಇಂದು ನಿಮ್ಮ ಮನಸ್ಸು ಉಲ್ಲಾಸದಿಂದ ಇರಲಿದೆ.

ಸಿಂಹ ರಾಶಿ : ದೈನಂದಿನ ಬಳಕೆಗೆ ಬೇಕಾದ ವಸ್ತುಗಳನ್ನು ಮಾರಾಟ ಮಾಡುವವರ ಆದಾಯದಲ್ಲಿ ಅಧಿಕಲಾಭವು ಆಗುವುದು. ಸಂಬಂಧಗಳನ್ನು ನಿರ್ವಹಿಸುವುದು ಕಷ್ಟವಾದೀತು. ನಿಮಗೆ ಸ್ನೇಹಿತರಿಂದ ಧನಸಹಾಯವು ಸಿಗಲಿದೆ. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲು ಕಷ್ಟವಾದೀತು. ಅದಕ್ಕೆ ಏನಾದರೂ ತೊಂದರೆಯಾದೀತು. ಪ್ರಯಾಣಕ್ಕೆ ಇಂದು ಅನುಕೂಲವಿಲ್ಲ.

ಕನ್ಯಾ ರಾಶಿ : ಮಕ್ಕಳನ್ನು ಒಳ್ಳೆಯ ಅಭ್ಯಾಸಕ್ಕೆ ತೊಡಗಿಸುವ ಯೋಚನೆ ಬರುವುದು. ಒಳಗೊಂದು ಹೊರಗೊಂದು ಸ್ವಭಾವವನ್ನು ತೋರಿಸುವುದು ಬೇಡ. ಮಕ್ಕಳ ಪ್ರಗತಿಯನ್ನು ನೀವು ನಿರೀಕ್ಷಿಸಿದ್ದು ಇಂದು ಸಾಫಲ್ಯದಂತೆ ಇರುವುದು. ಅತಿಯಾದ ವಿಶ್ವಾಸದಿಂದ ನಿಮಗೆ ವಂಚನೆಯಾಗಲಿದೆ. ನಿಮಗೂ ಸರ್ಕಾರದ ನಡುವೆಯೂ ವಿವಾದಗಳು ನಡೆಯಬಹುದು. ಯಾರಾದರೂ ನಿಮ್ಮ ಮೇಲೆ ಹಕ್ಕು ಚಲಾಯಿಸಬಹುದು.

ತುಲಾ ರಾಶಿ : ನಿಮ್ಮ ಮನಸ್ಸು ಹಲವು ದ್ವಂದ್ವಗಳಿಂದ ಏಕಾಂತದಲ್ಲಿ ಇರುವ ಮನಸ್ಸಾಗುವುದು. ಅನುಭವಿಗಳ ಮುಂದೆ ಮೌನವಾಗಿರುವುದು ಲೇಸು. ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ನಿರಂತರ ಕಾರ್ಯದಿಂದ ನಿಮಗೆ ಫಲವು ಲಭ್ಯವಾಗುವುದು. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರುಕು ಬಂದು ಮನೆಯಿಂದ ದೂರ ಇರುವಿರಿ.

ವೃಶ್ಚಿಕ ರಾಶಿ : ಭೂಮಿಯ ಖರೀದಿಯಲ್ಲಿ ವಂಚನೆ ಆಗಬಹುದು.ನಿಮ್ಮನ್ನು ಸ್ಥಾನದಿಂದ‌ ಕೆಳಗೆ ದೂಡಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು.

ಧನು ರಾಶಿ : ಇಂದು ಅನಾರೋಗ್ಯದಿಂದ ಚೇತರಿಕೆಯು ನಿಮ್ಮಲ್ಲಿ‌ ಕಾಣಿಸುವುದು. ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ನಿಮಗೆ ಯಾರ ಮಾತಿನ ಮೇಲೂ ಪೂರ್ಣ ನಂಬಿಕೆ ಇರದು. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು.

ಮಕರ ರಾಶಿ : ಸಹೋದರರಿಂದ ನಿಮಗೆ ಧೈರ್ಯವು ಸಿಗುವುದು. ದಾಂಪತ್ಯದಲ್ಲಿ ಸಂತೋಷವಿರಲು ಹೊಸತನ ಬೇಕಾದೀತು. ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದವು ವಿಕೋಪಕ್ಕೆ ಹೋಗಬಹುದು. ನೀವು ಅಂದುಕೊಂಡ ಕಾರ್ಯವನ್ನು ಮಾಡಲು ಸಮಯವೇ ಸಿಗದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗಿ ಇರದು.

ಕುಂಭ ರಾಶಿ : ಅನಾಯಾಸದಿಂದ ಬರುವ ಹಣವನ್ನು ದುರುಪಯೋಗ‌ ಮಾಡುವಿರಿ.‌ ಒತ್ತಡದಿಂದ ಕಾರ್ಯವನ್ನು ಮಾಡುವುದು ನಿಮಗೆ ಅಭ್ಯಾಸವಾಗಿದೆ. ಆತ್ಮೀಯರಿಂದ ನೀವು ಸಹಾಯವನ್ನು ಪಡೆಯುವಿರಿ. ನೀವು ಕಾರ್ಯದಲ್ಲಿ ತದೇಕಚಿತ್ತದಿಂದ ಇರುವಿರಿ. ಕೂಡಿಟ್ಟ ಹಣದಿಂದ ನಿಮಗೆ ಇಂದು ಪ್ರಯೋಜನವು ಸಿಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಕಛೇರಿಯಲ್ಲಿ ಅನ್ಯ ಕಾರಣಗಳಿಂದ ನಿಮ್ಮ ಕೆಲಸಗಳು ನಿಧಾನವಾಗಿ ಸಾಗಬಹುದು. ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌

ಮೀನ ರಾಶಿ : ಅಸಾಧಾರಣ ಸೋಲೂ ನಿಮಗೆ ಹೆಮ್ಮೆಯನ್ನು ತರಬಹುದು. ಇಂದು ನಿಮ್ಮ ಕುಟುಂಬವು ಸಂತೋಷವಾಗಿ ಇರುವುದನ್ನು ಕಣ್ತುಂಬಿಕೊಳ್ಳುವಿರಿ. ಕೆಲಸದಲ್ಲಿ ಸಾವಧಾನತೆ ಇರಲಿ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಯಾವುದನ್ನೂ ಕಲ್ಪಿಸಿಕೊಂಡು ದುಃಖಿಸುವುದು ಬೇಡ. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಯಾರದೋ ಒತ್ತಡದಿಂದ ನಿಮ್ಮ ದಿನಚರಿಯನ್ನು ವ್ಯತ್ಯಾಸ‌ ಮಾಡಿಕೊಳ್ಳುವಿರಿ.

Leave a Reply

Your email address will not be published. Required fields are marked *