ಮಂಗಳೂರು :(ಅ.9) ಉಪನ್ಯಾಸಕ ಅರುಣ್ ಉಳ್ಳಾಲ್ ರವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.
ಇದನ್ನೂ ಓದಿ: 💥ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು
ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿರುವುದನ್ನು ಖಂಡಿಸಿದ ಮಾಜಿ ಸಂಸದರು, ಪೊಲೀಸ್ ಅಧಿಕಾರಿಗಳು ರಾಜ್ಯ ಸರಕಾರ ಆಡಿಸುವ ಆಟಕ್ಕೆ ತಕ್ಕಂತೆ ಆಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾ.ಜ.ಪಾ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.