Ratan Tata is no more:(ಅ.10) ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.



