ನೆಲ್ಯಾಡಿ:(ಅ.12) ಬೆಂಗಳೂರು ಮೂಲದ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ: ⚖Daily Horoscope: ಸಂಕಷ್ಟದ ಸನ್ನಿವೇಶವನ್ನು ಬುದ್ಧಿವಂತಿಕೆಯಿಂದ ದಾಟಬೇಕಾಗುವುದು!!
ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಗುದ್ದಿದ ರಭಸಕ್ಕೆ ಬಸ್ನ ಡ್ರೈವರ್ ಬಸ್ನಿಂದ ಹೊರಗಡ ಎಸೆಯಲ್ಪಟ್ಟು, ಬಸ್ಸಿನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ.
ಈ ಖಾಸಗಿ ಸ್ಲೀಪರ್ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್- ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗೋಕರ್ಣದಿಂದ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.