Fri. Apr 11th, 2025

Bantwala: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು!! – ಮಂಗಳೂರು ಮೂಲದ ಮಹಿಳೆ ಮೃತ್ಯು!!! – ದಂಪತಿಗೆ ಗಂಭೀರ ಗಾಯ

ಬಂಟ್ವಾಳ:(ಅ.14) ಬಂಟ್ವಾಳ ತಾಲೂಕಿನ ಬಾಂಬಿಲ ದ ಮಸೀದಿ ಬಳಿಯ ತಿರುವಿನಲ್ಲಿ ಮುಂಜಾನೆಯ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಕಾರು ಉರುಳಿದ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ನಾಪತ್ತೆಯಾದ ಯುವಕ ಹೆಣವಾಗಿ ಪತ್ತೆ!

ಮೂಲತಃ ಮಂಗಳೂರು ಕೋಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲ್ಯೂಡಿ ಇಂಜಿನಿಯರ್ ಗೋಪಾಲರವರ ಸಹೋದರಿ ಕೋಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ವ.) ಮೃತಪಟ್ಟ ಮಹಿಳೆಯಾಗಿದ್ದಾರೆ.

ಚಾಲಕ ರೂಪೇಶ್ (40 ವ.) ಅವರಿಗೆ ಗಂಭೀರ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರ (33 ವ.) ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಹಿತಿ ಲಭಿಸಿದೆ.

ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಗ್ಗಿನ ಜಾವ ಸುಮಾರು 4.30 ಗಂಟೆ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತ ಸಂಭವಿಸಿದೆ.


ಭಾಗೀರಥಿರವರ ಪುತ್ರಿ ಸುಚಿತ್ರರವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು