Sat. Apr 19th, 2025

Karkala: ಮೂಡಬಿದ್ರೆ ಎಸ್. ಎನ್. ಎಮ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ರಿತಿಕ್ ಪೂಜಾರಿ ರಾಜ್ಯ ಮಟ್ಟದ ಕೈಗಾರಿಕೆ ಮತ್ತು ತಾಂತ್ರಿಕ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ:(ಅ.16) ಎಸ್. ಎನ್. ಎಮ್ ಪಾಲಿಟೆಕ್ನಿಕ್ (ಸಂವಹನ ವಿಭಾಗ) ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಸೆಪ್ಟಂಬರ್ 13 ರಂದು ಐ.ಟಿ.ಐ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ,

ಇದನ್ನೂ ಓದಿ: ⭕ಪುತ್ತೂರು: ಆಟೋ ರಿಕ್ಷಾದಲ್ಲಿ ಅಮಾನುಷವಾಗಿ ಗೋ ಸಾಗಾಟ

ಜಿಲ್ಲಾ ಮಟ್ಟದ ನವಥಾಮ್-2024 ನಲ್ಲಿ ಭಾಗವಹಿಸಿದ ರಿತಿಕ್ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ,


ನಂತರ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು (KPT) ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಯೋಜನೆಯಡಿಯಲ್ಲಿ ಸೆಪ್ಟೆಂಬರ್ 27ರಂದು ಆಯೋಜಿಸಿದ್ದ

ರಾಜ್ಯ ಮಟ್ಟದ ಕೈಗಾರಿಕೆ ಮತ್ತು ತಾಂತ್ರಿಕ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ,

ಇಂದು (ಅಕ್ಟೋಬರ್ 16) ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

Leave a Reply

Your email address will not be published. Required fields are marked *