Wed. Nov 20th, 2024

Mangalore: ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮಹತ್ತರದ ಪ್ರಕಟಣೆ .! ಏನು .?

ಮಂಗಳೂರು :(ಅ.16) ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಪಾದಚಾರಿಗೆ ಡಿಕ್ಕಿ ಹೊಡೆದ ಕೆಎಸ್‌ ಆರ್‌ ಟಿ ಸಿ ಬಸ್!

ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.


ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.


ಅ.19ರವರೆಗೆ ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಅಕ್ಟೋಬರ್ 19ರವರೆಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಬೆಂಗಳೂರಿನಲ್ಲಿ ಅ.19ರವರೆಗೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ, ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Mangalore : The meteorological department has predicted that there is a possibility of heavy rainfall in the coastal districts from A.16 to 19 in the wake of the depression in the south-west Bay of Bengal

Leave a Reply

Your email address will not be published. Required fields are marked *