Tue. Apr 8th, 2025

Puttur: ಭಜನೆ ಮತ್ತು ಬಿಲ್ಲವ ಮಹಿಳೆಯರ ವಿರುದ್ಧ ನಾಲಗೆ ಹರಿಬಿಟ್ಟ ಅರಣ್ಯಾಧಿಕಾರಿ – ಆರೋಪಿ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಂದರ್

ಪುತ್ತೂರು:(ಅ.18) ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ⭕ಬೆಳ್ತಂಗಡಿ :‌ ಪ್ರಾಣ ಬಲಿ ಪಡೆಯಲು ಹೊಂಚು ಹಾಕುತ್ತಿರುವ ರಸ್ತೆಯ ಹೊಂಡ- ಗುಂಡಿಗಳು!!!

ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು.

ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದ ಬೆನ್ನಿಗೆ ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಬಿಲ್ಲವ ಯುವತಿಯರ ಬಗ್ಗೆ ಸಂಜೀವ ಪೂಜಾರಿ ಕೀಳುಮಟ್ಟದ ಹೇಳಿಕೆ ನೀಡಿದ್ದಾಗಿ ಆರೋಪಿಸಲಾಗಿದೆ. ಸಂಜೀವ ಪೂಜಾರಿ ಬಂಧನಕ್ಕೆ ಇಂದು ಸಂಜೆಯವರೆಗೆ ಹಿಂಜಾವೇ ಗಡುವು ನೀಡಿತ್ತು.

Leave a Reply

Your email address will not be published. Required fields are marked *