ಬೆಳ್ತಂಗಡಿ:(ಅ.19) ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಮತ ನೀಡುವಂತೆ
ಇದನ್ನೂ ಓದಿ: ಮಂಗಳೂರು: ನಾಪತ್ತೆಯಾದ ಅಮ್ಮನಿಗಾಗಿ 14 ವರ್ಷ ಹುಡುಕಾಟದ ವನವಾಸ
ಆರಂಬೋಡಿ, ಹೊಸಂಗಡಿ, ಮರೋಡಿ/ಕಾಶಿಪಟ್ನ ಹಾಗೂ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು,
ಶಾಸಕರಾದ ಶ್ರೀ ಹರೀಶ್ ಪೂಂಜರವರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಚುನಾವಣಾ ಸಂಚಾಲಕರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.