Wed. Nov 20th, 2024

SM.Krishna: ಹಿರಿಯ ರಾಜಕಾರಣಿ ಎಸ್ ಎಮ್.ಕೃಷ್ಣ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು!

SM.Krishna:(ಅ.19) ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​.ಎಮ್.​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ಕೊಕ್ಕಡ ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ

92 ವರ್ಷದ ಎಸ್.​ಎಮ್.​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​.ಎಮ್. ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಹಿರಿಯ ರಾಜಕಾರಣಿ ಎಸ್.ಎಮ್. ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *