ಆಂಧ್ರಪ್ರದೇಶ:(ಅ.20) ದಕ್ಷಿಣ ಭಾರತದ ರಾಜ್ಯಗಳ ಜನ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ.
ಇದನ್ನೂ ಓದಿ: ⭕ತಾಯಿ ಬಗ್ಗೆ ಕೀಳಾಗಿ ಮಾತಾಡಿದ ಚೈತ್ರಾ!!
ದಕ್ಷಿಣ ಭಾರತದ ರಾಜ್ಯಗಳಲ್ಲಿ ವಯಸ್ಸಾದವರ ಸಂಖ್ಯೆ ಹೆಚ್ಚಳವಾಗುತ್ತಿದೆ. ವೃದ್ಧರ ಸಂಖ್ಯೆ ಹೆಚ್ಚುತ್ತಿದ್ದು, ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿ ಚಂದ್ರಬಾಬು ನಾಯ್ಡು ಅವರು, ಹೆಚ್ಚಿನ ಮಕ್ಕಳಿರುವ ಕುಟುಂಬಗಳಿಗೆ ಪ್ರೋತ್ಸಾಹ ಕೊಡಲು, ಹೊಸ ಕಾನೂನುಗಳನ್ನು ರಚಿಸುವ ಜೊತೆಗೆ ಜನಸಂಖ್ಯೆ ನಿರ್ವಹಣೆಯನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ಜಾರಿ ಮಾಡಲು ಸರ್ಕಾರ ಯೋಜಿಸಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಲ್ಲದೆ 2047 ರ ವರೆಗೆ ಜನಸಂಖ್ಯಾ ಪ್ರಯೋಜನವನ್ನು ಹೊಂದಿದ್ದರೂ, ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಏರಿಕೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ. ಹೀಗಾಗಿ ನಾವು ಈ ಸಮಸ್ಯೆ ತಡೆಗಟ್ಟಲು ಹೆಚ್ಚು ಮಕ್ಕಳನ್ನು ಹೊಂದಬೇಕು ಎಂದಿದ್ದಾರೆ.