ಬೆಂಗಳೂರು :(ಅ.21) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಭೈರತಿ ಸುರೇಶ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: 🟠ಪುತ್ತೂರು : ವಿಧಾನಪರಿಷತ್ ಉಪ ಚುನಾವಣೆ ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ
ರಾಜ್ಯದಲ್ಲಿ ಮುಡಾ ಹಗರಣ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಈ ಕುರಿತಂತೆ “ಭೈರತಿ ಸುರೇಶ್ ಬಂಧನವಾದರೆ ಹಗರಣದ ಸತ್ಯಾಂಶ ಬಯಲಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ” ಹೇಳಿಕೆ ನೀಡಿದ್ದರು.
ಈ ಬೆನ್ನಲ್ಲೇ ಸಚಿವೆ ವಿರುದ್ಧ ಸಚಿವ ಭೈರತಿ ಸುರೇಶ್ ಗಂಭೀರ ಆರೋಪ ಮಾಡಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂಬ ಅನುಮಾನವಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಇದೆ ಎಂದು ನನಗೆ ಅನುಮಾನ ಇದೆ.
ರಾಜ್ಯ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಳ್ಳೆಯವರು. ಅವರ ಮಕ್ಕಳು ಕೂಡ ಒಳ್ಳೆಯವರು. ಹಾಗಾದರೆ, ಯಡಿಯೂರಪ್ಪನವರ ಪತ್ನಿ ಮೈತ್ರಾ ದೇವಿ ಅವರ ಸಾವು ಹೇಗಾಯ್ತು.
ಆ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರ ಇರುವ ಬಗ್ಗೆ ನನಗೆ ಅನುಮಾನ ಇದೆ. ಅವರ ಸಾವಿನ ಬಗ್ಗೆ ತನಿಖೆ ಆಗಬೇಕು. ಸಚಿವೆ ಶೋಭಾ ಕರಂದ್ಲಾಜೆ ಅವರ ಬಂಧನ ಆಗಬೇಕು. ಕೂಡಲೇ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.