ಬೆಂಗಳೂರು (ಅ. 23): ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಉಪಚುನಾವಣೆಯ ಭರಾಟೆ ಜೋರಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮೊದಲ ಸುತ್ತಿನ ಗೆಲುವು ದಕ್ಕಿದ್ದು, ಮೈತ್ರಿ ನಾಯಕರ ವಿರುದ್ಧ ಮತ್ತೆ ಡಿ ಕೆ ಬ್ರದರ್ಸ್ ತೊಡೆ ತಟ್ಟಿದ್ದಾರೆ.
ಇದನ್ನೂ ಓದಿ: 🟠ಬೆಳ್ತಂಗಡಿ:(ಅ.31) ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನಲ್ಲಿ ಯುವ ಮೋರ್ಚಾ ವತಿಯಿಂದ
ರಾಜ್ಯ ರಾಜಕೀಯದಲ್ಲಿ ಗಂಟೆ ಗಂಟೆಗೂ ರಾಜಕೀಯ ಬದಲಾಗುತ್ತಿರುತ್ತದೆ. ನಿನ್ನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಸಿಪಿ ಯೋಗೇಶ್ವರ್ ಇವತ್ತು ಬೆಳಗ್ಗೆಯೇ ಶಿವಕುಮಾರ್ ನಿವಾಸದಲ್ಲಿ ಪ್ರತ್ಯೇಕ್ಷರಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ ಡಿ ಕೆ ಬ್ರದರ್ಸ್ ಹಾಗೂ
ಬಿಜೆಪಿ ನಾಯಕರ ಸಿ ಪಿ ಯೋಗೇಶ್ವರ್ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಸಿಎಂ ಜೊತೆಗೆ ಚರ್ಚೆ ನಡೆಸಿದ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು.
ಕಾಂಗ್ರೆಸ್ ಸೇರ್ಪಡೆಯಾಗಲಿರುವ ಸಿ ಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತವಾಗಿದೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.