Sat. Jan 3rd, 2026

Mangalore: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮದ್ ಸಲೀಂ ಅರೆಸ್ಟ್!!

ಮಂಗಳೂರು :(ಅ.23) ಸೈಬರ್ ಇಕೋನಾಮಿಕ್ ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: 🛑ಬೆಂಗಳೂರು: ಸಿಎಂ ಆಶೀರ್ವಾದ ಪಡೆದು ಕಾಂಗ್ರೆಸ್ ಸೇರ್ಪಡೆಗೊಂಡ ಸಿ.ಪಿ. ಯೋಗೇಶ್ವರ್!!

ಉಳ್ಳಾಲ ಒಳಪೇಟೆಯ ಸಲೀಂ ಯಾನೆ ಮೊಹಮದ್ ಸಲೀಂ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು 2019ರಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜಾಮೀನು ಪಡೆದ ಬಳಿಕ ಕಳೆದ ನಾಲ್ಕು ವರ್ಷದಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಖಚಿತ ಮಾಹಿತಿಯ ಮೇರೆಗೆ ಮಂಗಳವಾರ ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮಾದೇವ್ ಮಾಂಗ್ ಮತ್ತು ತಿಪ್ಪಾರೆಡ್ಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *