Sun. Apr 13th, 2025

Bengaluru: ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ!

ಬೆಂಗಳೂರು: (ಅ.24) ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: 💠ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭ!

ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು.

ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ , ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.

ಸಚಿವ ಭೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಭೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *