Wed. Nov 20th, 2024

Mangalore: ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭ!

ಮಂಗಳೂರು:(ಅ.24)ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭಗೊಂಡಿದೆ.

ಇದನ್ನೂ ಓದಿ: ⭕ಮಲ್ಲಿಕಾ ಶೆರಾವತ್‌ ಅತೀ “ಕೆಟ್ಟ ಕಿಸ್ಸರ್‌” ಎಂದ ಇಮ್ರಾನ್ ಹಶ್ಮಿ!!!

ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುತ್ತದೆ. ನಂತರ ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ ಮಾಡಲಾಗುವುದು.

ಮತ ಪತ್ರಗಳ ಎಣಿಕೆಗೆ 12 ಮೇಜುಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ.


ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್‌ ಕುಮಾರ್‌ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.

Leave a Reply

Your email address will not be published. Required fields are marked *