ಉಜಿರೆ:(ಅ.24) ಯುಜಿಸಿಯಿಂದ ಸ್ವಾಯತ್ತ ಸಂಸ್ಥೆ ಎಂಬ ಮಾನ್ಯತೆಗೆ ಪಾತ್ರವಾಗಿರುವ ಉಜಿರೆಯ ಶ್ರೀ ಧ.ಮಂ. ಕಾಲೇಜಿನ 2023-24ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಅ. 26ರಂದು ಶನಿವಾರ ನಡೆಯಲಿದೆ.
ಇದನ್ನೂ ಓದಿ: ⭕Bigg Boss: ಬಿಗ್ ಬಾಸ್ ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ಸ್ಪರ್ಧಿ ವಿರುದ್ಧ FIR ದಾಖಲು !!?
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನ ಉಪಾಧ್ಯಕ್ಷರು ಹಾಗೂ
ಗುಲ್ಬರ್ಗ ವಿವಿಯ ಪೂರ್ವ ಕುಲಪತಿ ಪ್ರೊ. ಎಸ್. ಆರ್. ನಿರಂಜನ ಅವರು ಮುಖ್ಯ ಭಾಷಣ ಮಾಡಲಿದ್ದು, ಮಂಗಳೂರು ವಿವಿ ಉಪ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಪ್ರೊ. ಎಸ್. ಪ್ರಭಾಕರ್ ಮತ್ತು ಡಿ. ಸುರೇಂದ್ರ ಕುಮಾರ್ ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಅವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ವಿಶೇಷ ಸಮಾರಂಭದಲ್ಲಿ 2023-24 ನೇ ಸಾಲಿನ 300 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ
30 ಪದವಿಯ ವಿವಿಧ ವಿಭಾಗಗಳ ರ್ಯಾಂಕ್ (Rank) ವಿಜೇತರಿಗೆ ಪದವಿ ಗೌರವ ನೀಡಿ ಪುರಸ್ಕರಿಸಲಾಗುವುದು ಎಂದು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.