Tue. Apr 15th, 2025

Belthangadi: ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಬೆಳ್ತಂಗಡಿ:(ಅ.30) ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ನಡೆಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ:(ನ.1) ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ

ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಶ್ರೀ ನವೀನ್ ಬಿ ಕೆ. ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಶ್ರೀಮತಿ ಸುವರ್ಣಲತಾ ಇವರು ಸವಿವರವಾಗಿ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಲೀನಾ ಡಿಸೋಜ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಮತ್ತು ಮಕ್ಕಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *