ಬೆಂಗಳೂರು :(ಅ.30) ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಜನರನ್ನು ಹೆಚ್ಚು ಬಾಧಿಸುತ್ತಿದ್ದು, ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ನವವಿವಾಹಿತನೋರ್ವ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತರನ್ನು ಪ್ರಜ್ವಲ್ (24) ಎಂದು ಗುರುತಿಸಲಾಗಿದ್ದು, ಐದು ದಿನದ ಹಿಂದಷ್ಟೇ ಇವರ ವಿವಾಹವಾಗಿತ್ತಂತೆ. ಇವರು ರಾಜಾಜಿನಗರದ ನಿವಾಸಿ ಎಂದು ವರದಿಯಾಗಿದೆ. ಅಕ್ಟೋಬರ್ 28ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸುದ್ದಿ ಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 28ರಂದು ಮನೆಯಲ್ಲಿರುವಾಗ ಪ್ರಜ್ವಲ್ ಗೆ ಹೃದಯಾಘಾತವಾಗಿದ್ದು , ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ಮುಟ್ಟುವ ಮುನ್ನವೇ ಪ್ರಜ್ವಲ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.