ಬೆಂಗಳೂರು:(ಅ.31) ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಸಿಎಂ ಸಿದ್ದರಾಮಯ್ಯ
ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ⭕ದೇಶದ ಮೊದಲ ಲವ್ ಜಿಹಾದ್ ಪ್ರಕರಣ ಯಾವುದು ಗೊತ್ತಾ?
ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿ, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ನಂತರ ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ,
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಅದಲ್ಲದೆ ನಿನ್ನೆಯ ಕಾರ್ಯಕ್ರಮದಲ್ಲಿ ನಾನು ಇರಲಿಲ್ಲ. ಅಲ್ಲಿ ಏನು ನಡೆದಿದೆಯೋ ಅದು ನನ್ನ ಹೇಳಿಕೆ ಅಲ್ಲ. ನಾನು ಡಿಕೆ ಶಿವಕುಮಾರ್ ರವರ ಜೊತೆ ಮಾತಾಡುತ್ತೇನೆ.
ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು.