Kadaba: (ನ.2) ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.2 ಶನಿವಾರ ನಡೆದಿರುವ ಕುರಿತು ವರದಿಯಾಗಿದೆ.

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬುವವರ ಪುತ್ರ ಜೈಸನ್ ಜಾರ್ಜ್(29) ಮೃತಪಟ್ಟವರು.



ಅನಾರೋಗ್ಯದಿಂದ ಬಳಲುತ್ತಿದ್ದ ಜೈಸನ್ ಅವರನ್ನು , ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಶನಿವಾರ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ, ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
