Fri. Jan 2nd, 2026

Guruprasad suicide: ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ!!

Guruprasad suicide:(ನ.3) ಜಗ್ಗೇಶ್ ನಟನೆಯ “ಮಠ”, “ಎದ್ದೇಳು ಮಂಜುನಾಥ” ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ⭕ಯೋಗಿ ಆದಿತ್ಯನಾಥ್ 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಬಾಬಾ ಸಿದ್ದಿಕಿ ರೀತಿ ಸಾಯ್ತಾರೆ!!

ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು.

ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.

Leave a Reply

Your email address will not be published. Required fields are marked *