ಬೆಳ್ತಂಗಡಿ:(ನ.3) ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ⭕ಸಕಲೇಶಪುರ : ವಕ್ಫ್ ಬೋರ್ಡ್ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಕಾಂಗ್ರೆಸ್ ಕನಸಿನ ಕೂಸು
ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿನ ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ರಾತ್ರಿ 8 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು , ಆತ್ಮಹತ್ಯೆ ಮಾಡಿಕೊಳ್ಳಲು ಮನೆಯಲ್ಲಿ ನಡೆದ ಕೌಟುಂಬಿಕ ಕಲಹ ಕಾರಣ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ, ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿ ನಂತರ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾನೆ.
ಅಲ್ಲಿ ಯಾವುದೋ ಕಾರಣಕ್ಕಾಗಿ ತನ್ನ ಮನೆಯವರೊಂದಿಗೆ ಜಗಳವಾಗಿದೆ. ಇದೇ ವೇಳೆ ಮನೆಗೆ ಬಂದ ನಿತಿನ್ ಬಾಗಿಲು ಹಾಕಿ ನೇಣು ಬಿಗಿದುಕೊಂಡಿದ್ದಾನೆ. ಮನೆಯವರು ಸಂಜೆ ಬಂದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಗೊತ್ತಾಗಿದೆ.
ತಕ್ಷಣ ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟೊತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಜಗಳಕ್ಕೆ ನಿಖರ ಕಾರಣ ಏನೆಂದು ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.