ಉಜಿರೆ:(ನ.3) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ.06 ರಂದು ಬೆಳಗ್ಗೆ 11 ಘಂಟೆಗೆ ಉದ್ಘಾಟನೆ ನಡೆಯಲಿದೆ.
ಇದನ್ನೂ ಓದಿ: ⭕ಲಾಯಿಲ: ನೇಣು ಬಿಗಿದುಕೊಂಡು 26 ರ ಯುವಕ ಆತ್ಮಹತ್ಯೆ!!
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಮಾನ್ಯ ಶಾಸಕರಾದ ಹರೀಶ್ ಪೂಂಜ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ.
ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯಚಂದ್ರ ಸೇನೆರಬೆಟ್ಟು , ಬಿ.ಕೆ. ಸಂತೋಷ ರಾವ್ ಕಿಲ್ಲೂರು ಹಾಗೂ ಬೆಳ್ತಂಗಡಿಯ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ವಾಸುದೇವ ಕಕ್ಕೆನೇಜಿ ಅವರು ಕರಪತ್ರವನ್ನು ಅನಾವರಣಗೊಳಿಸಲಿದ್ದಾರೆ.
ಶ್ರೀ ಧ.ಮಂ. ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ , ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ , ಶಿಬಿರ ಸಮಿತಿ ಅಧ್ಯಕ್ಷ ಮೋಹನ್ ಕಿಲ್ಲೂರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರತನ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ರಮೇಶ ಪೈಲಾರ್ ಇವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಪ್ರತಿದಿನ ಧ್ವಜಾರೋಹಣ , ಶ್ರಮದಾನ , ಸ್ಥಳೀಯ ವಿದ್ಯಾರ್ಥಿಗಳಿಗೆ ‘ ಸ್ಪೂರ್ತಿ ‘ ಕಾರ್ಯಕ್ರಮ , ಮಧ್ಯಾಹ್ನ ಶೈಕ್ಷಣಿಕ ಕಾರ್ಯಕ್ರಮ ಹಾಗೂ ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.