Tue. Feb 11th, 2025

Hassan: ಹಸೆಮಣೆ ಏರಬೇಕಿದ್ದ ಕಾನ್ಸ್‌ಟೇಬಲ್‌ನ ಬರ್ಬರ ಹತ್ಯೆ!!!

ಹಾಸನ:(ನ.5) ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ⭕Kasaragod : ಎಡನೀರು ಮಠದ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ!!!

ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್.

ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು.

ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

Leave a Reply

Your email address will not be published. Required fields are marked *