ಕಾಸರಗೋಡು:(ನ.5) ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿನ ಮೇಲೆ ಸೋಮವಾರ ದಾಳಿ ನಡೆದಿದ್ದು , ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ⭕ಇಬ್ಬರು ಗರ್ಲ್ ಫ್ರೆಂಡ್ ಜೊತೆ ಸೇರಿ ಪತ್ನಿಯ ಹತ್ಯೆ!!
ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ಶ್ರೀಗಳಿಗೆ ಅವಮಾನ ಮಾಡಿದೆ.
ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದ ದುಷ್ಕರ್ಮಿಗಳು ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ.
ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎಂದು ಹಿಂದೂಪರ ಸಂಘಟನೆಗಳು ಕೆಂಡಕಾರಿವೆ.
ಅಲ್ಲದೆ, ಘಟನೆ ಖಂಡಿಸಿ ಇವತ್ತು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಭಕ್ತರು ಆಗ್ರಹಿಸಿದ್ದಾರೆ.