ಕೊಕ್ಕಡ:(ನ.5) ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ: 🟣ಬೆಳ್ತಂಗಡಿ: ಇತಿಹಾಸ ಬರೆಯಲು ಸಜ್ಜಾದ ತುಳು ಚಿತ್ರರಂಗ
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.