Sun. Apr 13th, 2025

Mysore Muda case: 40 ವರ್ಷದ ರಾಜಕೀಯ ಜೀವನದಲ್ಲಿ ಸಿದ್ಧರಾಮಯ್ಯ ಮೊದಲ ಬಾರಿಗೆ ಭ್ರಷ್ಟಾಚಾರ ಕೇಸ್‌ ತನಿಖೆಗೆ ಲೋಕಾಯುಕ್ತ ಕಚೇರಿಗೆ ಹಾಜರ್‌!!!!

ಮೈಸೂರು:(ನ.6) ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು, ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. 40 ವರ್ಷದ ರಾಜಕೀಯ ಜೀವನದಲ್ಲಿ ಸಿಎಂ ತನಿಖೆಗೆ ಹಾಜರಾಗುತ್ತಿರುವುದು ಇದೇ ಮೊದಲು.

ಇದನ್ನೂ ಓದಿ: 🟣ಪುತ್ತೂರು: ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಒಲಿದ “ಕರ್ನಾಟಕ ಜಾನಪದ ಪ್ರಶಸ್ತಿ”

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗಾಗಿ ಹಾಜರಾಗಿದ್ದಾರೆ.


ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

Leave a Reply

Your email address will not be published. Required fields are marked *