Fri. Apr 11th, 2025

America : ಹೆರಿಗೆಯಾದ ಕೆಲವೇ ಗಂಟೆಗಳ ನಂತರ ನವಜಾತ ಶಿಶುವನ್ನು ಫೇಸ್‌ಬುಕ್‌ ಮೂಲಕ ಮಾರಾಟ ಮಾಡಿದ ಮಹಿಳೆ

ಅಮೇರಿಕದ ಟೆಕ್ಸಾಸ್‌ನಲ್ಲಿ 21 ವರ್ಷದ ಜುನಿಪರ್ ಬ್ರೈಸನ್ ಎಂಬ ಮಹಿಳೆ ತನ್ನ ಹೆರಿಗೆಯಾದ ಕೆಲವೇ ಗಂಟೆಗಳ ನಂತರ ತನ್ನ ನವಜಾತ ಶಿಶುವನ್ನು ಫೇಸ್‌ಬುಕ್‌ ಮೂಲಕ ಮಾರಾಟ ಮಾಡಲು ಪ್ರಯತ್ನಿಸಿದ್ದಾಳೆ.

ಹಣಕಾಸಿನ ತೊಂದರೆಯಿಂದಾಗಿ ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಹೇಳಿಕೊಂಡಿದ್ದಾಳೆ. ಪೊಲೀಸರು ಮಗುವನ್ನು ರಕ್ಷಿಸಿ ಮಹಿಳೆಯನ್ನು ಬಂಧಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿರುವ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದಿದೆ.

ಜುನಿಪರ್ ಬ್ರೈಸನ್(21) ಮಗುವಿನ ಫೋಟೋವನ್ನು ಫೇಸ್‌ಬುಕ್ನ ಮಗು ದತ್ತು ಪಡೆಯಲು ಬಯಸುವ ದಂಪತಿಗಳ ಗುಂಪಿನಲ್ಲಿ ಹಂಚಿಕೊಂಡಿದ್ದಾರೆ. ಪ್ರಾರಂಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದ ಈ ಮಹಿಳೆ ಬಳಿಕ ಸಾಕಷ್ಟು ದಂಪತಿಗಳು ದತ್ತು ಪಡೆಯಲು ಮುಂದೆ ಬಂದಾಗ ಹಣದ ಬೇಡಿಕೆ ಇಟ್ಟಿದ್ದಾಳೆ.

150 ಡಾಲರ್​ ಅಂದರೆ ಸುಮಾರು 12 ಸಾವಿರ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾಳೆ. ಘಟನೆಯ ಬಗ್ಗೆ ತಿಳಿದ ಪೊಲೀಸರು ಮಗುವನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯ ನಂತರ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು